ಕೆಎಸ್ಸಾರ್ಟಿಸಿ ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ | ಐವರ ದಾರುಣ ಸಾವು 

27/12/2020

ಚಿತ್ರದುರ್ಗ: ಕೆಎಸ್ಸಾರ್ಟಿಸಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು 7 ಜನರಿಗೆ ಗಂಭೀರ ಗಾಯವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ.

ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19), ದುರ್ಗಪ್ಪ(16) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಲೂಸರ್ ಮತ್ತು ಬೆಂಗಳೂರಿನಿಂದ ಲಿಂಗಸುಗೂರಿನತ್ತ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕ್ರೂಸರ್ ನಲ್ಲಿದ್ದ ಐವರು ಸಾವನ್ನಪ್ಪಿದ್ದು, 7 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಳಕಾಲ್ಮೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version