ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ: ಬೆಂಗಳೂರು ಮೂಲದ ತಾಯಿ ಮಗ ಸಾವು: ಓರ್ವನ ಸ್ಥಿತಿ ಗಂಭೀರ
12/08/2023
ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ ಮಗ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.
ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳಾಗಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಶಿವಯಾಗಯ್ಯ ಹಿರೇಮಠ್ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ಕೋಣನಕುಂಟೆಯವರಾಗಿದ್ದಾರೆ. ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಕಾರು ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಸಖಲೇಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರ ದೇಹಗಳು ಕೂಡ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಅಪಘಾತದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಆತಂಕ ವ್ಯಕ್ತಪಡಿಸಿದ್ರು..