ಸರ್ಕಾರಿ ಬಸ್—ಕಾರಿನ ನಡುವೆ ಅಪಘಾತ: ತಾಯಿ ಸಾವು, ಮಗ ಅಪಾಯದಿಂದ ಪಾರು
ಬೆಳಗಾವಿ: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿರ್ಮಲ ಅವಟೆ(60) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರು ಚಾಲಕ, ಚಿಕ್ಕೋಡಿ ಹೆಸ್ಕಾಂ ಉಪ ವಿಭಾಗ ಸಹಾಯಕ ಅಭಿಯಂತರ ನೇಮಿನಾಥ ಅವಟೆ(43) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಮಾರಾಣಿ ಸಮೀಪದ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ನೇಮಿನಾಥ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಠಾಣೆ ಡಿವೈಎಸ್ ಪಿ ಗೋಪಾಲ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸಂಚಾರಿ ಠಾಣೆಯ ಪಿಎಸ್ ಐ ರೂಪಾ ಗುಡೋಡ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: