ಕೆ.ಎಸ್.ಆರ್.ಟಿ.ಸಿ ಬಸ್ –- ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು
ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಅಪಘಾತದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಡೊಂಬಯ್ಯ ಮೂಲ್ಯ, ಮೃತಪಟ್ಟ ದುರ್ದೈವಿ. ಇವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡೊಂಬಯ್ಯ ಅವರು ಅವರ ಸಂಬಂಧಿಕರ ಮನೆಯಲ್ಲಿ ಸಂಕ್ರಮಣದ ದಿನದಂದು ದೈವದ ಕೆಲಸಕ್ಕೆ ಹೂ ತರಲೆಂದು ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಚಾಲಕನ ಅಜಾಗಕರೂಕತೆಯ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw