ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಮೃತ್ಯು - Mahanayaka

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಮೃತ್ಯು

accident
15/03/2022

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ.

ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ(35) ಮೃತ ಮಹಿಳೆಯಾಗಿದ್ದಾರೆ. ಇವರು ಪತಿ ಹಾಗೂ ಮಗುವಿನ ಜೊತೆ ಸ್ಕೂಟಿಯಲ್ಲಿ
ಕುಂದಾಪುರದಲ್ಲಿ ವೃದ್ಧಾಶ್ರಮ ಒಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಹೆಮ್ಮಾಡಿ ಕಡೆಯಿಂದ ಕುಂದಾಪುರ ಕಡೆಗೆ ಮಣ್ಣು ಸಾಗಾಟದ ಟಿಪ್ಪರ್ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮಗು ಹಾಗೂ ಆಕೆಯ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

 

ಇತ್ತೀಚಿನ ಸುದ್ದಿ