ಫ್ಲೈಓವರ್ ಮೇಲೆ ಸರಣಿ ಅಪಘಾತ, ಬೈಕ್ ಸವಾರನಿಗೆ ಗಾಯ
ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೂರು ಕಾರುಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಫ್ಲೈ ಓವರ್ ಮೇಲೆ ನಡೆದಿದೆ.
ಬಿಎಂಟಿಸಿ ವೋಲ್ವೋ ಬಸ್ ಎಚ್ಎಸ್ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು. ಅದೇ ಸಮಯದಲ್ಲಿ ಯಲಹಂಕ ಕಡೆಯಿಂದ ಆರ್ ಟಿ ನಗರದ ಕಡೆಗೆ ಆಕಾಶ್ ಪಾಟೀಲ್ (27) ಬೈಕ್ ನಲ್ಲಿ ಹೋಗುತ್ತಿದ್ದಾಗ ಎಸ್.ಟಿ. ಮಾಲ್ ಬಳಿ ಈ ಬಸ್ ಡಿಕ್ಕಿ ಹೊಡೆದು ನಂತರ ಮುಂದೆ ಚಲಿಸುತ್ತಿದ್ದ ಮೂರು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಆಕಾಶ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಬಗ್ಗೆ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth