ನ್ಯೂಇಯರ್ ಪಾರ್ಟಿಗೆ ಗೋವಾಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: 10 ಮಂದಿಗೆ ಗಾಯ, ನಾಲ್ವರು ಗಂಭೀರ - Mahanayaka

ನ್ಯೂಇಯರ್ ಪಾರ್ಟಿಗೆ ಗೋವಾಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: 10 ಮಂದಿಗೆ ಗಾಯ, ನಾಲ್ವರು ಗಂಭೀರ

goa
31/12/2024

ಹಾವೇರಿ: ನಿಂತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡು 6 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ  ಹಾವೇರಿ ಜಿಲ್ಲೆಯ  ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ.

ಪೂನಾ—ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ನಡೆದಿದೆ. ನ್ಯೂ ಇಯರ್ ಪಾರ್ಟಿ ಮಾಡಲು ಗೋವಾಕ್ಕೆ ತೆರಳುತ್ತಿದ್ದ ಆಂಧ್ರ ಮೂಲದ ಯುವಕರ ತಂಡದ ಕಾರು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ದಾವಣಗೆರೆ ಮೂಲದ ತೇಜಸ್(25), ಸಂದೇಶ್ (25), ದೀಪಕ್(25) ಮತ್ತು ವೆಂಕಟೇಶ್ (26) ಗಂಭೀರವಾಗಿ ಗಾಯಗೊಂಡಿದ್ದಾರೆ. ವೀರೇಶ್(23), ಲಕ್ಷ್ಮಣ್(23), ಅಶೋಕ್(24), ಗೌಡನಬಿ(24), ಸಾಗರ್(26)  ಹಾಗೂ ಸಂಕೇತ್(36) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ