ಬೈಕ್ –ಲಾರಿ ನಡುವೆ ಅಪಘಾತ: ಮೂವರ ದಾರುಣ ಸಾವು
06/09/2024
ರಾಮನಗರ: ಬೈಕ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.
ಗುರುಮೂರ್ತಿ (39), ಶೇಖ್ ಆಸೀಫ್ (45), ವೆಂಕಟೇಶ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ.
ಇನ್ನೂ ಅಪಘಾತವಾದ ಲಾರಿಯಲ್ಲಿ ಆರೋಪಿ ಅಷ್ಟೇ, ಅಪರಾದಿ ಅಲ್ಲ, ಖೈದಿ ನಂಬರ್ 6106 ಅಂತ ಬರೆದಿರುವುದು ಕಂಡು ಬಂತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: