ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
ಬೆಂಗಳೂರು: ಇಂದು ನೂತನ ಸಚಿವರ ಪ್ರಮಾಣ ವಚನದ ಬೆನ್ನಲ್ಲೇ ಖಾತೆ ಹಂಚಿಕೆಯಾಗಿದೆ ಎಂಬ ಪ್ರಕಟಣೆಯ ಪಟ್ಟಿಯೊಂದು ವೈರಲ್ ಆಗಿದ್ದು, ಮಾಧ್ಯಮಗಳಲ್ಲಿ ಕೂಡ ವರದಿಯಾಗಿದೆ. ಆದರೆ ಇದು ನಕಲಿ ಪಟ್ಟಿ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪಟ್ಟಿಯೊಂದು ವೈರಲ್ ಆಗಿತ್ತು. ಈ ಪಟ್ಟಿ ನಕಲಿ ಎಂದು ಇದೀಗ ಹೇಳಲಾಗಿದೆ. ಸಚಿವರಿಗೆ ಖಾತೆ ಹಂಚಿಕೆಯ ಬಗ್ಗೆ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದವು.ಇದೀಗ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw