ಜಾತ್ರೋತ್ಸವದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಯುವಕನ ವಿರುದ್ಧ ಪ್ರಕರಣ ದಾಖಲು

ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆಂದು ಆರೋಪಿಸಿ ಯುವಕನ ವಿರುದ್ಧ ಪ್ರಕರಣ ದಾಖಲಾದ ಘಟನೆ ಮಂಗಳೂರಲ್ಲಿ ನಡೆದಿದೆ.
ಕಂಕನಾಡಿ ನಗರ ಠಾಣೆಯ ವಿನ್ಸೆಂಟ್ ಅಶೋಕ್ ಲೋಬೋ ಅವರು ಪೊಲೀಸ್ ಕಾನ್ಸ್ಟೇಬಲ್ ದಿನೇಶ್ ರಾಠೋಡ್ ಜೊತೆ ಮಂಗಳೂರು ನಗರದ ಮರೋಳಿ ಸೂರ್ಯ ನಾರಾಯಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಬಂದೋಬಸ್ತ್ ಕರ್ತವ್ಯದಲ್ಲಿರುವಾಗ ರಾತ್ರಿ ಅಚಲ್ ವಿ.ಸಿ. ಎಂಬಾತ ತನ್ನ ಸ್ಕೂಟರನ್ನು ದೇವಸ್ಥಾನದ ಬಳಿಯ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಸಾರ್ವಜನಿರು ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುವಂತೆ ನಿಲ್ಲಿಸಿದ್ದ.
ಆವಾಗ ವಿನ್ಸೆಂಟ್ ಅಶೋಕ್ ಲೋಬೋ ಅವರು ಸ್ಕೂಟರ್ ಹೀಗೆ ನಿಲ್ಲಿಸಿದರೆ ಜಾತ್ರೋತ್ಸವಕ್ಕೆ ಬರುವ ಜನರಿಗೆ ತೊಂದರೆಯಾಗುತ್ತದೆ. ಸ್ವಲ್ಪ ಮುಂದೆ ಹೋಗಿ ವಾಹನವನ್ನು ನಿಲ್ಲಿಸುವಂತೆ ಹೇಳಿದ್ದಾರೆ. ಈ ವೇಳೆ ಯುವಕ ಏರು ಧ್ವನಿಯಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಯುವಕ ಕೀಯನ್ನು ಸ್ಕೂಟರ್ನಲ್ಲಿಯೇ ಬಿಟ್ಟು ಹೋದಾಗ ಪೊಲೀಸ್ ಸಿಬ್ಬಂದಿ ಸ್ಕೂಟರನ್ನು ಸ್ವಲ್ಪಮುಂದೆ ಹೋಗಿಟ್ಟಾಗ, ಯುವಕ ಸಮವಸ್ತ್ರದ ಧರಿಸಿದ್ದ ತನ್ನ ಭುಜದ ಪಟ್ಟಿಯನ್ನು ಹಿಡಿದು ಎಳೆದು ಕರ್ತವ್ಯಕ್ಕೆ ಅಡ್ಡಿಪಡಿಸಿ ಎಡ ಕೆನ್ನೆಗೆ, ಎಡ ಕುತ್ತಿಗೆ, ಎದೆಯ ಎಡಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಪೊಲೀಸ್ ಸಿಬ್ಬಂದಿ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw