ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ಆರೋಪಿಗಳ ಕಾಲಿಗೆ ಗುಂಡೇಟು!
ರಾಮನಗರ: ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ರೌಡಿಶೀಟರ್ ಗಳ ಮೇಲೆ ಕನಕಪುರ ನಗರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಕಳೆದ ವಾರ ಕನಕಪುರ ತಾಲೂಕಿನ ಮಳಗಾಳು ಗ್ರಾಮದ ಯುವಕ ಅನೀಶ್ ಅವರ ಎಡಗೈ ಕತ್ತರಿಸಿದ್ದ ರೌಡಿ ಶೀಟರ್ ಗಳು ಪರಾರಿಯಾಗಿದ್ದರು.
ಈ ಸಂಬಂಧ ಆರೋಪಿಗಳನ್ನು ಪೊಲೀಸರು ಶೋಧ ನಡೆಸುತ್ತಿದ್ದರು. ಇಂದು ಖಚಿತ ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಲು ಮುಂದಾದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಎಂಬವರ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಆರೋಪಿಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಕುಮಾರ್ ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: