ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿದ್ದ ಆರೋಪಿ ಅರೆಸ್ಟ್

20/01/2024
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿ ಮಾನಹಾನಿಗೆ ಯತ್ನಿಸಿದ ಆರೋಪಿಯೋರ್ವನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಈ ವಿಡಿಯೋವನ್ನು ಎಡಿಟ್ ಮಾಡಿರುವ ವ್ಯಕ್ತಿ ಎಂದು ಹೇಳಲಾಗಿರುವ ಶಂಕಿತ ಆರೋಪಿಯನ್ನು ದಕ್ಷಿಣ ಭಾರತದಿಂದ ಬಂಧಿಸಲಾಗಿದ್ದು, ವಿಚಾರಣೆಗಾಗಿ ದೆಹಲಿಗೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.
ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಂಬಂಧ ನವೆಂಬರ್ 10 ರಂದು ದೆಹಲಿಯ ವಿಶೇಷ ಪೂಲೀಸ್ ಘಟಕವಾದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ನಲ್ಲಿ ದೂರು ನೀಡಲಾಗಿತ್ತು. ಸೆಕ್ಷನ್ 66C ಮತ್ತು 66E ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಮಂದಣ್ಣ ಅವರ ಫೇಕ್ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿ ವಿವರ ಪಡೆದುಕೊಳ್ಳಲು ತನಿಖಾಧಿಕಾರಿಗಳು ಮೆಟಾಗೆ ಐಎಫ್ ಎಸ್ ಒ ಘಟಕ ಪತ್ರ ಬರೆದಿತ್ತು. ಇದೀಗ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.