ಗ್ರಾಮ‌ ಪಂಚಾಯತಿ ಹಂತದಲ್ಲೇ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ - Mahanayaka

ಗ್ರಾಮ‌ ಪಂಚಾಯತಿ ಹಂತದಲ್ಲೇ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

priyank kharge
13/07/2023

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ತಂತ್ರಾಂಶದ ಲೋಪದೋಷ, ಸಿಬ್ಬಂದಿಗಳ ವೇತನ ವಿಳಂಬ, ಸಿಬ್ಬಂದಿ ಕೊರತೆ, ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಾಹ ನೋಂದಣಿ, ಜನನ ಮರಣ ಪ್ರಮಾಣ ಪತ್ರ ನೀಡುವ ಕುರಿತಂತೆ ವಿಧಾನ ಪರಿಷತ್  ಸದಸ್ಯರಾದ  ಕೋಟ ಶ್ರೀನಿವಾಸ ಪೂಜಾರಿ ಅವರು ನಿಯಮ 330 ಅಡಿ ಮಂಡಿಸಿದ ಸೂಚನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಗ್ರಾಮ ಪಂಚಾಯತಿಗಳಲ್ಲಿ ಸಂಪನ್ಮೂಲಗಳ ಕೊರತೆ ಇರುವುದರಿಂದ ವೇತನ ವಿಳಂಬವಾಗುತ್ತಿದ್ದು, ಅದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯ ಹಣಕಾಸು ಆಯೋಗದ ಅನುದಾನದಡಿ ರೂ 811 ಕೋಟಿಗಳನ್ನು ನಾಲ್ಕು ತ್ರೈಮಾಸಿಕ ಕಂತುಗಳಲ್ಲಿ  ಬಿಡುಗಡೆ ಮಾಡಲಾಗುತ್ತಿದೆ. ಇನ್ನು ಮುಂದೆ e-FMS module ತಂತ್ರಾಂಶದ ಮೂಲಕ ಆನ್‌ಲೈನ್ ನಲ್ಲಿಯೇ ಸಿಬ್ಬಂದಿಗಳಿಗೆ ವೇತನ‌ ಪಾವತಿಸಲಾಗುವುದು ಎಂದು ತಿಳಿಸಿದರು.

ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ Hindu Marriage (Karnataka) Rules 1966 & The Special Marriage Act 1954 ರ ಸೆಕ್ಷನ್ 3 ರ ಅಡಿಯಲ್ಲಿ ವಿವಾಹ ಕಾಯ್ದೆ ನೋಂದಾಣಾಧಿಕಾರಿಗಳ ಅಧಿಕಾರವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಲು ಒಳಾಡಳಿತ ಇಲಾಖೆಯಿಂದ ಅನುಮೋದನೆ ಕೋರಿ  ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.  ಒಳಾಡಳಿತ ಇಲಾಖೆಯ ಸಹಮತಿ ದೊರಕಿದ ನಂತರ ಗ್ರಾಮ ಪಂಚಾಯತಿ ಹಂತದಲ್ಲಿ ವಿವಾಹ ನೋಂದಣಿ ಪ್ರಮಾಣ ಪತ್ರವನ್ನು ವಿತರಿಸಲು ಕ್ರಮ ವಹಿಸಲಾಗುವುದು ಎಂದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR


Provided by

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ