ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಸಾಬೀತಾದರೆ ಕ್ರಮ: ದೇಶದ್ರೋಹಿಗಳನ್ನು ಮಟ್ಟ ಹಾಕ್ತೇವೆ: ಸಿಎಂ ಸಿದ್ದರಾಮಯ್ಯ - Mahanayaka
1:40 AM Wednesday 18 - September 2024

ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಸಾಬೀತಾದರೆ ಕ್ರಮ: ದೇಶದ್ರೋಹಿಗಳನ್ನು ಮಟ್ಟ ಹಾಕ್ತೇವೆ: ಸಿಎಂ ಸಿದ್ದರಾಮಯ್ಯ

siddaramaiah
28/02/2024

ಬೆಂಗಳೂರು: ನೂತನ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಬಿಜೆಪಿ ಪಕ್ಷದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ವಿಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಲಾಗಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ, ದೇಶದ್ರೋಹಿಗಳನ್ನು ಮಟ್ಟ ಹಾಕುತ್ತೇವೆ ಎಂದು  ಹೇಳಿದರು.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.


Provided by

ಘಟನೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಇಂದು ಬೆಳಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.

ನಾಸಿರ್ ಸಾಬ್ ಜಿಂದಾಬಾದ್ ಎಂದು ಹೇಳಿರುವುದನ್ನು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದು ಸುಳ್ಳು ವಿಡಿಯೋ, ಪಾಕಿಸ್ತಾನಕ್ಕೂ ರಾಜ್ಯಸಭೆಗೂ ಏನು ಸಂಬಂಧ ಅಂತ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಪ್ರತಿಭಟನೆಯ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶವಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

ಬಿಜೆಪಿಯ ಆರೋಪಿಗಳಿಗೆ ಕಾಂಗ್ರೆಸ್ ನಾಯಕರು ಕೂಡ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದು ಕಾಲ್ಪನಿಕ ಘಟನೆಯಾಗಿದೆ ಎಂದಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ. ಘೋಷಣೆ ಕೂಗಿರುವ ಆಡಿಯೋದಲ್ಲಿ ಸೈಯದ್ ಸಾಬ್, ನಾಸಿರ್ ಹುಸೇನ್ ಜಿಂದಾಬಾದ್ ಅಂತ ಹೇಳಿದ್ದಾರೆ. ನಾವು ಜವಬ್ದಾರಿಯುತವಾಗಿಯೇ ಪರಿಶೀಲನೆ ಮಾಡಲು ಹೇಳಿದ್ದೆವು. ಪಾಕಿಸ್ತಾನದ ಪರವಾಗಿ ಯಾವುದೇ ಘೋಷಣೆ ಕೂಗಿಲ್ಲ. ವಿಡಿಯೋ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿಕೊಡಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ