ಬಿಜೆಪಿ ನಾಯಕರ ಫೋಟೋಗೆ ಚಪ್ಪಲಿ ಹಾರ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿದ ಕಾರ್ಯಕರ್ತರು
ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಆಳವಡಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
‘ಬಿಜೆಪಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ.
ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw