ಟಿಕೆಟ್ ಬದಲು ಕೈ ಕೊಟ್ಟ ಕಾಂಗ್ರೆಸ್: ವೈ.ಎಸ್.ವಿ.ದತ್ತಾ ನಿವಾಸದಲ್ಲಿ ಜಮಾಯಿಸಿದ ಕಾರ್ಯಕರ್ತರು

ಚಿಕ್ಕಮಗಳೂರು: ವೈ.ಎಸ್.ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ.
ಪಕ್ಷೇತರರಾಗಿ ಚುನಾವಣೆಗೆ ನಿಲ್ಲುವಂತೆ ದತ್ತಾ ಅವರ ಅಭಿಮಾನಿಗಳ ಪಟ್ಟು ಹಿಡಿದಿದ್ದು, ಟಿಕೆಟ್ ಕೈ ತಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ದತ್ತಾ ಅವರ ನಿವಾಸದ ಬಳಿ ಸಾವಿರಾರು ಅಭಿಮಾನಿಗಳು ದೌಡಾಯಿಸಿ ಜಮಾಯಿಸಿದ್ದಾರೆ.
ಸಂಜೆ ಬೆಂಗಳೂರಿನಿಂದ ಯಗಟಿ ಗ್ರಾಮದ ಮನೆಗೆ ದತ್ತಾ ಆಗಮಿಸಿದ್ದರು. ದತ್ತಾ ಅವರಿಗಾಗಿ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ಮನೆ ಮುಂಭಾಗದಲ್ಲಿ ಸಾವಿರಾರು ಅಭಿಮಾನಿಗಳು ಕಾದುಕುಳಿತಿದ್ದರು.
ಬಳಿಕ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ದತ್ತಾ, ಚುನಾವಣೆಯ ಬಗ್ಗೆ ಯಾವುದೇ ರೀತಿಯ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲು 2 ದಿನಗಳ ಸಮಯ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ದತ್ತಾ ಅವರನ್ನು ಬಿಟ್ಟು, ನಾವು ಕಾಂಗ್ರೆಸ್ ಅಭ್ಯರ್ಥಿಯ ಹಿಂದೆ ನಿಂತು ಕೆಲಸ ಮಾಡ್ಬೇಕಾ? ಎಂದು ದತ್ತ ಅಭಿಮಾನಿಗಳು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw