ಪುಷ್ಪಾ 2 — ನಟ ಅಲ್ಲು ಅರ್ಜುನ್ ಅರೆಸ್ಟ್
ಹೈದರಾಬಾದ್: ಪುಷ್ಪಾ 2 ಚಿತ್ರದ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿರುವ ಕೇಸ್ ಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಡಪಲ್ಲಿ ಠಾಣೆಯಲ್ಲಿ ಅಲ್ಲು ಅರ್ಜುನ್, ಚಿತ್ರಮಂದಿರದ ಮಾಲಿಕ, ಬೌನ್ಸರ್ ಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅವರನ್ನೂ ವಿಚಾರಣೆಗೊಳಪಡಿಸಲಾಗಿದೆ. ಇದೀಗ ಅಲ್ಲು ಅರ್ಜುನ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದಿರುವ ವಿಚಾರ ತಿಳಿದು ಅವರ ತಂದೆ ಅಲ್ಲು ಅರವಿಂದ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನೋಟಿಸ್ ಗೆ ಉತ್ತರ ನೀಡದ ಅಲ್ಲು ಅರ್ಜುನ್:
ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಡಪಲ್ಲಿ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ, ನೋಟಿಸ್ ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ. ಅದರ ಬದಲು ಪ್ರಕರಣ ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ಬಾಕಿಯಿರುವಾಗಲೇ ಇದೀಗ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: