ನಟ ಚೇತನ್ ಪೊಲೀಸ್ ವಶಕ್ಕೆ: ಚೇತನ್ ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ | ಪತ್ನಿ ಮೇಘಾ ಆತಂಕ
ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ಯಾವುದೇ ನೋಟಿಸ್ ನೀಡದೇ ಪೊಲೀಸರು ಬಂಧಿಸಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಚೇತನ್ ಅವರ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಮನೆಯಲ್ಲಿದ್ದ ಚೇತನ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಮನೆಯಲ್ಲಿದ್ದ ವರ್ಕರ್ಸ್ ಹೇಳಿದರು. ಅವರ ಮೊಬೈಲ್ ಗೆ ಕರೆ ಮಾಡಿದರೆ, ಸ್ವಿಚ್ ಆಫ್ ಎಂದು ಬರುತ್ತಿದೆ ಎಂದು ಅವರು ಹೇಳಿದ್ದಾರೆ.
ಚೇತನ್ ಎಲ್ಲಿದ್ದಾರೆ ಎನ್ನುವುದು ನನಗೆ ಗೊತ್ತಾಗುತ್ತಿಲ್ಲ, ಹಾಗಾಗಿ ನಾನು ಶೇಷಾದ್ರಿಪುರಂ ಪೊಲೀಸ್ ಸ್ಟೇಷನ್ ಗೆ ಬಂದಿದ್ದೇನೆ. ನನ್ನ ಹಸ್ಬೆಂಡ್ ಈಗ ನಾಪತ್ತೆಯಾಗಿದ್ದಾರೆ. ಇಲ್ಲಿ ಬಂದು ನೋಡಿದರೆ ಅವರು ಇಲ್ಲಿಲ್ಲ ಎಂದು ಅವರು ಹೇಳಿದ್ದಾರೆ.
ಚೇತನ್ ಅವರಿಗೆ ಯಾವುದೇ ನೋಟಿಸ್ ಬಂದಿಲ್ಲ, ಆದರೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಣ ಕೇಳಿದರೆ ಹೇಳುತ್ತಿಲ್ಲ. ಕುಟುಂಬಸ್ಥರಿಗೂ ಯಾವುದೇ ಮಾಹಿತಿ ನೀಡಿಲ್ಲ, ಸುಮ್ನೆ ಮನೆಗೆ ಬಂದು, ಕರೆದುಕೊಂಡು ಹೋಗಿದ್ದಾರೆ. ಇದು ಒಂದು ಅಪಹರಣದಂತೆ ನಡೆಸಿದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪತ್ನಿ, ಅತ್ತೆಯನ್ನು ಮಚ್ಚಿನಿಂದ ಹೊಡೆದು ಕೊಂದ ಪಾಪಿ!
ಬುರ್ಖಾ ಧರಿಸಿದವರಿಗೆ ಥಳಿತ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತು ಬಯಲು
ತನ್ನನ್ನು ಸಿಂಹಕ್ಕೆ ಹೋಲಿಸಿಕೊಂಡ ಸಚಿವ ಈಶ್ವರಪ್ಪ!
ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ