ನಟ ದರ್ಶನ್ ಅರೆಸ್ಟ್: ದರ್ಶನ್ ಸೂಚನೆ ಮೇರೆಗೆ ನಡೆದಿತ್ತೇ ಹತ್ಯೆ?
![darshan](https://www.mahanayaka.in/wp-content/uploads/2024/04/darshan.jpg)
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ.
ವರದಿಗಳ ಪ್ರಕಾರ, ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.
ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆ ವೇಳೆ ದರ್ಶನ್ ಸೂಚನೆ ಮೇರೆಗೆ ಹತ್ಯೆ ಮಾಡಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth