ನಟ ದರ್ಶನ್ ಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು - Mahanayaka
3:37 PM Thursday 6 - February 2025

ನಟ ದರ್ಶನ್ ಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು

darshan
30/10/2024

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದರ್ಶನ್ ​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್ ​ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕೆಂದು ವಾಸ ಮಂಡಿಸಿದರು. ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್​ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲವೆಂದು ವಾದಿಸಿದರು.

ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಾದಗಳನ್ನು ಆಲಿಸಿದ ಕೋರ್ಟ್, ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ದರ್ಶನ್​ಗೆ ಹೆಚ್ಚಿನ ಷರತ್ತುಗಳನ್ನೇನೂ ನ್ಯಾಯಾಧೀಶರು ವಿಧಿಸಿಲ್ಲ. ಎಸ್ ​ಪಿಪಿ ಮನವಿ ಮೇರೆಗೆ ಪಾಸ್​ಪೋರ್ಟ್​ ವಶಕ್ಕೆ ನೀಡುವಂತೆ ಸೂಚಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ