ಜಾಮೀನು ದೊರೆತ ಬೆನ್ನಲ್ಲೇ ನಟ ದರ್ಶನ್ ಆಸ್ಪತ್ರೆಯಿಂದ ಬಿಡುಗಡೆ!
ಬೆಂಗಳೂರು: ಬೆನ್ನು ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ನಟ ದರ್ಶನ್ ಗೆ ತೀವ್ರ ಬೆನ್ನು ನೋವಿನ ಕಾರಣ ಸರ್ಜರಿ ಮಾಡಿಸಬೇಕೋ ಅಥವಾ ಫಿಸಿಯೋ ಥೆರಪಿ ಮಾಡುವುದೋ ಎನ್ನುವ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು. ಇದೀಗ ಜಾಮೀನು ಮಂಜೂರು ಆಗುತ್ತಿದ್ದಂತೆಯೇ ಅವರು ಬಿಡುಗಡೆಯಾಗಿದ್ದಾರೆ.
ಸದ್ಯ ನಟ ದರ್ಶನ್ ಅವರು ಆಸ್ಪತ್ರೆಯಿಂದ ಹೊರ ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ನಟ ದರ್ಶನ್ ಫಿಸಿಯೋ ಥೆರಪಿ ಮೂಲಕವೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ ಸರ್ಜರಿ ಮಾಡಿಸಿಕೊಳ್ಳುತಿಲ್ಲ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: