ಖ್ಯಾತ ಕಿರುತೆರೆ ನಟ ಮಂಡ್ಯ ರವಿ ನಿಧನ
ಕನ್ನಡ ಕಿರುತೆರೆಯ ಖ್ಯಾತ ನಟ ಮಂಡ್ಯ ರವಿ ಅವರು ಕೆಲ ಕಾಲದ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ಇವರ ನಿಧನಕ್ಕೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ರವಿ ಪ್ರಸಾದ್ ಎಂ. ಎಂಬ ಹೆಸರಿನ ಇವರು ತಮ್ಮ ವೃತ್ತಿ ಕ್ಷೇತ್ರದಲ್ಲಿ ಮಂಡ್ಯ ರವಿಯಾಗಿ ಖ್ಯಾತಿಯನ್ನು ಪಡೆದವರಾಗಿದ್ದಾರೆ. ಸಹಜ ನಟನೆಯ ಮೂಲಕ ಅಪಾರವಾದ ಅಭಿಮಾನಿಗಳನ್ನು ಸೆಳೆದಿದ್ದರು. ಎಂಎ ಇಂಗ್ಲಿಷ್ ಮತ್ತು ಎಲ್ ಎಲ್ ಬಿ ಮಾಡಿದ್ದರೂ ನಟನೆಯನ್ನು ವೃತ್ತಿಯಾಗಿ ಸ್ವೀಕರಿಸಿ ಯಶಸ್ವಿಯಾಗಿದ್ದರು.
ಟಿ.ಎಸ್.ನಾಗಾಭರಣ ನಿರ್ದೇಶನದ ‘ಮಹಾಮಾಯಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆಗೆ ಕಾಲಿಟ್ಟಿದ್ದರು. ಆ ಬಳಿಕ ಕಿರುತೆರೆಯಲ್ಲಿ ಹಲವಾರು ಧಾರಾವಾಹಿ ಹಾಗೂ ಸಿನಿಮಾದಲ್ಲಿಯೂ ಅವರು ಅಭಿನಯಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka