500ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಹಿರಿಯ ನಟ ನೆಡುಮುಡಿ ವೇಣು ನಿಧನ - Mahanayaka
10:26 AM Thursday 12 - December 2024

500ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಹಿರಿಯ ನಟ ನೆಡುಮುಡಿ ವೇಣು ನಿಧನ

nedumudi venu
11/10/2021

ತಿರುವನಂತಪುರಂ:  ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ಅವರು ಸೋಮವಾರ ನಿಧನರಾಗಿದ್ದು, 73 ವರ್ಷ ವಯಸ್ಸಿನ  ವೇಣು ಅವರು ಗಂಭೀರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ತಿರುವನಂತಪುರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ವೇಣು(Nedumudi Venu) ಅವರು, ಇತ್ತೀಚೆಗೆ ಕೊರೊನಾ ಸೋಂಕಿಗೊಳಲಾಗಿದ್ದರು. ಬಳಿಕ ಗುಣಮುಖರಾಗಿದ್ದರು. ಆದರೂ ಅವರಿಗೆ ಹಲವು ಆರೋಗ್ಯ ಸಮಸ್ಯೆಗಳಿದ್ದವು. ಭಾನುವಾರ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ವೇಳೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪತ್ರಕರ್ತನಾಗಿ ವೃತ್ತಿ ಆರಂಭಿಸಿದ ವೇಣು ಅವರು ಹೆಚ್ಚು ಪ್ರಖ್ಯಾತರಾಗಿದ್ದು ನಟನೆಯ ಮೂಲಕವಾಗಿದೆ.  ಸಿನಿಮಾದಲ್ಲಿ ನಟಿಸುವುದಕ್ಕೂ ಮೊದಲು ಅವರು ರಂಗಭೂಮಿಯಲ್ಲಿ ನಟಿಸಿದ್ದರು.  1978ರಲ್ಲಿ ಅವರು ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ರಾಜಕೀಯ ಅಂದ್ರೆ, ಜನರ ಮೇಲೆ ಫಾರ್ಚುನರ್‌ ಕಾರು ಹರಿಸುವುದಲ್ಲ | ತನ್ನ ಪಕ್ಷದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡ!

ಯುವತಿ ಮೇಲೆ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಡ

ಪತ್ನಿಗೆ ಹಾವಿನಿಂದ ಕಚ್ಚಿಸಿ ಹತ್ಯೆ: ಪತಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಮೋದಿ ಸರ್ಕಾರ ಕಾರ್ಮಿಕ, ರೈತ ಕಾನೂನುಗಳನ್ನು ದುರ್ಬಲಗೊಳಿಸುತ್ತಿದೆ | CPIM ಮುಖಂಡ ವಸಂತ ಆಚಾರಿ

ತುಮಕೂರು: ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸ್ವಂತ ನಿವೇಶನ ಮಂಜೂರು ಮಾಡಲು ಸರ್ಕಾರಕ್ಕೆ ಮನವಿ

ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವು | ಇಬ್ಬರು ಮಕ್ಕಳ ಸ್ಥಿತಿ ಗಂಭೀರ

ಇತ್ತೀಚಿನ ಸುದ್ದಿ