ಅಮೃತ ವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ!
ಹೈದರಾಬಾದ್: ಖ್ಯಾತ ನಟ ಶರತ್ ಬಾಬು ಅವರು ಹಲವು ಸಮಯಗಳ ಗಂಭೀರ ಅನಾರೋಗ್ಯದ ಬಳಿಕ ಇಂದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶರತ್ ಬಾಬು ಅವರು ಏಪ್ರಿಲ್ ಮೊದಲ ವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಬಳಿಕ ಅವರನ್ನು ಹೈದರಾಬಾದ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶರತ್ ಬಾಬು ನಿಧನರಾಗಿದ್ದಾರೆ.
ಕನ್ನಡದಲ್ಲಿ ಅಮೃತವರ್ಷಿಣಿ ಸೇರಿದಂತೆ ಹಲವು ಚಿತ್ರಗಳಲ್ಲಿ ಶರತ್ ಬಾಬು ನಟಿಸಿದ್ದರು. ಶಕ್ತಿ, ಕಂಪನ, ರಣಚಂಡಿ, ತುಳಸಿದಳ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದ್ದರು. ಕನ್ನಡ ಮಾತ್ರವಲ್ಲದೇ ಹಲವು ಭಾಷೆಗಳ ಚಿತ್ರಗಳಲ್ಲಿ ಶರತ್ ಚಂದ್ರ ನಟಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw