ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟ ಶಿವರಾಜ್ ಕುಮಾರ್ ಮತಯಾಚನೆ - Mahanayaka
12:27 AM Wednesday 5 - February 2025

ಕಾಂಗ್ರೆಸ್ ಅಭ್ಯರ್ಥಿಗಳ ಪರ ನಟ ಶಿವರಾಜ್ ಕುಮಾರ್ ಮತಯಾಚನೆ

shivaraj kumar
01/05/2023

ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿ, ಮಧು ಬಂಗಾರಪ್ಪ ಗೆದ್ದರೆ, ಸೊರಬಕ್ಕೆ ಬಂದು ನಿಮ್ಮೊಂದಿಗೆ ಕುಣಿದು ಕುಪ್ಪಳಿಸುತ್ತೇನೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದರು.

ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮಧು ಬಂಗಾರಪ್ಪ ಪರ ಮತಯಾಚಿಸಿದ  ಅವರು,  ನಾನು ಸೊರಬಕ್ಕೆ ಹಲವಾರ ಬಾರಿ ಬಂದಿದ್ದೆ, ಆದ್ರೆ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲಿಲ್ಲ, ಮಧು ಬಂಗಾರಪ್ಪ ಅವರು ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ  ಅವರಿಗೆ ಜನ ಸೇವೆ ಮಾಡಲು ಇನ್ನಷ್ಟು ಅವಕಾಶಗಳು ಸಿಗಲಿ ಎಂಬ ಉದ್ದೇಶದಿಂದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೇನೆ ಎಂದರು.

ಮಧು ಅವರು ತಾಲೂಕಿನ ಜನತೆಯ ಕಷ್ಟ ಸುಖಗಳಲ್ಲಿ ಸದಾ ಇರುವುದರಿಂದ ಜನತೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವ ಭರವಸೆ ಇದೆ. ಗೆಲುವು ಸಾಧಿಸಿದ ನಂತರ ಅಭಿನಂದನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕುಣಿದುಕುಪ್ಪಳಿಸುತ್ತೇನೆ ಎಂದರು.

ಇನ್ನೂ ಸೊರಬ ಮಾತ್ರವಲ್ಲದೇ ರಾಜ್ಯದ ಇತರ ಕ್ಷೇತ್ರಗಳಾದ ಸಾಗರ, ತೀರ್ಥಹಳ್ಳಿ, ಬೀದರ್, ಶಿರಸಿ ಹಾಗೂ ಹುಬ್ಬಳ್ಳಿಯಲ್ಲಿ ಶೆಟ್ಟರ್ ಪರವಾಗಿ ಪ್ರಚಾರ ನಡೆಸುವುದಾಗಿ ಇದೇ ವೇಳೆ ಶಿವರಾಜ್ ಕುಮಾರ್ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ