ಬಂಧನದ ಭೀತಿಯ ನಡುವೆ ಹೈಕೋರ್ಟ್ ಮೊರೆ ಹೋದ ನಟ ಉಪೇಂದ್ರ!
ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಇದೇ ವೇಳೆ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಆದ್ರೆ ಈ ನಡುವೆ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ.
ನಾನು ಯಾವುದೇ ಸಮುದಾಯದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿಲ್ಲ, ಮಾತಿಗೆ ಪೂರಕವಾಗಿ ಗಾದೆ ಮಾತು ಬಳಸಿದ್ದು, ಆಕ್ಷೇಪ ವ್ಯಕ್ತವಾದ ಕೂಡಲೇ ವಿಡಿಯೋ ಡಿಲೀಟ್ ಮಾಡಿ ಕ್ಷಮೆ ಕೋರಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದೇನೆ, ಜಾತಿ ನಿಂದನೆ ಅಲ್ಲ, ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ ಎಂದು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಅವರು ತಿಳಿಸಿದ್ದಾರೆಂದು ಹೇಳಲಾಗಿದೆ.
ಈ ಹಿಂದೆ ನಟ ಉಪೇಂದ್ರ ಅವರು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ “ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲಾರರು” ಎಂಬ ಹೇಳಿಕೆ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿ ವಿವಾದಕ್ಕೆ ಕಾರಣರಾಗಿದ್ದರು, ಇದೀಗ ನೇರವಾಗಿ ಜಾತಿಯನ್ನು ಎತ್ತಿ ಮಾತನಾಡುವ ಮೂಲಕ ಮತ್ತೊಮ್ಮೆ ಅವಹೇಳನಾಕಾರಿ ಆಕ್ರಮಣ ಮುಂದುವರಿಸಿದ್ದಾರೆ. ಹೀಗಾಗಿ ಹೋರಾಟಗಾರರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸದ್ಯ ಕೋರ್ಟ್ ಏನು ತೀರ್ಮಾನ ಕೈಗೊಳ್ಳಲಿದೆ ಅನ್ನೋದನ್ನು ಕಾದುನೋಡಬೇಕಿದೆ.