ಥೈಲ್ಯಾಂಡ್ ನ ಸುಂದರ ಪರಿಸರದಲ್ಲಿ ಕಾಣಿಸಿಕೊಂಡ ನಟಿ ಮೇಘನಾ ರಾಜ್
ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದು, ತಮ್ಮ ಆಪ್ತ ಸ್ನೇಹಿತೆಯರ ಜೊತೆಗೆ ಥೈಲ್ಯಾಂಡ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಥೈಲ್ಯಾಂಡ್ ನ ಸಂತೋಷಕರ ಸನ್ನಿವೇಶಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಥೈಲ್ಯಾಂಡ್ ನ ಸುಂದರ ಪರಿಸರಗಳಲ್ಲಿ ಫೋಟೋಗಳನ್ನು ತೆಗೆಸಿಕೊಂಡಿರುವ ಮೇಘನಾ ಸ್ವಿಮ್ಮಿಂಗ್ ಫೂಲ್ ಗಳಲ್ಲಿ ಹಾಗೂ ವಿವಿಧ ಸುಂದರ ಪರಿಸರಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಚಿರು ಅಗಲಿಕೆಯ ನೋವಿನೊಂದಿಗೆ, ಜೀವನಕ್ಕೆ ಸವಾಲು ಹಾಕುತ್ತಾ, ಮೇಘನಾ ಮೈಕೊಡವಿ ನಿಂತಿದ್ದಾರೆ. ಈಗಾಗಲೇ ಅವರು ಚಿತ್ರವೊಂದರಲ್ಲಿ ನಟಿಸಲು ಮುಂದಾಗಿದ್ದಾರೆ. ಈ ಮೂಲಕ ತೆರೆಯ ಮೇಲೆ ಮಿಂಚಲು ಸಜ್ಜಾಗಿದ್ದಾರೆ.
ಮೇಘನಾ ಅವರ ಹಲವು ಬಗೆಯ ಫೋಟೋಗಳಿಗೆ ನೆಟ್ಟಿಗರು ತಮ್ಮ ಮನಸ್ಥಿತಿಗೆ ತಕ್ಕಂತೆ ಕಮೆಂಟ್ ಗಳನ್ನು ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka