ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪ: ವಿಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
ಮೈಸೂರು: ವಿಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಇರುವ ಆರೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿರುವ ಬಗ್ಗೆ ವರದಿಯಾಗಿದೆ.
ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಅವರು ಬಾಲಕೃಷ್ಣ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಆರೋಪದ ಮೇಲೆ ಬಾಲಕೃಷ್ಣ ಮನೆ ಮೇಲೆ ಮಾ. 16ರಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ವಿಜಯನಗರದಲ್ಲಿರುವ ಬಾಲಕೃಷ್ಣರ ಮನೆ ಹಾಗೂ ಹಾಸನದ ಚನ್ನರಾಯಪಟ್ಟಣದಲ್ಲಿರುವ ಬಾಲಕೃಷ್ಣ ಸಂಬಂಧಿಕರ ಮನೆಗಳ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಬಾಲಕೃಷ್ಣ ಮಾವ ಕಾಂಗ್ರೆಸ್ ಮುಖಂಡ ಚಂದ್ರೇಗೌಡ ಅವರ ಹೊಳೆನರಸೀಪುರ-ಚನ್ನರಾಯಪಟ್ಟಣ ರಸ್ತೆಯಲ್ಲಿರುವ ಮನೆ ಹಾಗೂ ಪಟ್ಟಣದಲ್ಲಿರುವ ನಿವಾಸಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಹಲವು ಮಹತ್ವದ ದಾಖಲೆ ವಶಪಡೆದುಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಎಸಿಬಿ ಶಾಕ್: ಬೆಳ್ಳಂಬೆಳಗ್ಗೆ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ದಾಳಿ
ಉಕ್ರೇನ್ ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ
ಅಪ್ರಾಪ್ತ ಮಕ್ಕಳನ್ನು ಬಿಟ್ಟು ಗೆಳೆಯನ ಜತೆ ಓಡಿ ಹೋದ ತಾಯಿ
ಹಕ್ಕಿಯನ್ನು ಹುಡುಕಲು ಹೋದ ಮಕ್ಕಳು: ಅಮೆಜಾನ್ ಕಾಡಿನಲ್ಲಿ ಸಿಲುಕಿ 27 ದಿನ ಜೀವನ್ಮರಣ ಹೋರಾಟ