ಅಡ್ಡಾದಿಡ್ಡಿ ವಾಹನ ನಿಲುಗಡೆ: ಸಂಚಾರಕ್ಕೆ ಕಿರಿ ಕಿರಿ
ಕೊಟ್ಟಿಗೆಹಾರ: ಪಟ್ಟಣದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಗಳು, ವಾಹನಗಳು ನಿಲ್ಲಿಸಿದ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.
ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಜನ ಸಾಮಾನ್ಯರು ದಾಟಿ ಹೋಗಲು ಹರಸಾಹಸ ಪಡುವಂತಾಗಿದೆ. ಅಂಗಡಿ ಹೊಟೇಲ್ ಗಳ ಮುಂಬಾಗದ ರಸ್ತೆಯ ಮಧ್ಯದಲ್ಲೇ ಪ್ರವಾಸಿಗರು ಅಡ್ಡಾದಿಡ್ಡಿ ವಾಹನಗಳ ನಿಲುಗಡೆ ಮಾಡುತ್ತಿದ್ದು, ಇದರಿಂದಾಗಿ ಸಂಚಾರಕ್ಕೆ ಕಿರಿಕಿರಿ ಉಂಟಾಗಿದೆ.
ರಸ್ತೆ ಮಾರ್ಗವಾಗಿ ಚಲಿಸುವ ಬಹುತೇಕ ವಾಹನಗಳು ಮುಂದೆ ಚಲಿಸಲು ಹರಸಹಾಸ ಪಡುವಂತಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ಈ ಸಮಸ್ಯೆ ಕಂಡು ಬಂದಿದ್ದು, ಈ ಬಗ್ಗೆ ಸಂಬಂಧಪಟ್ಟವರು ಕ್ರಮಕೈಗೊಳ್ಳಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw