ಅಡ್ಡಹೊಳೆ: ಭೀಕರ ಅಪಘಾತ | ಮೂವರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರ ಗಾಯ - Mahanayaka
8:59 PM Thursday 12 - December 2024

ಅಡ್ಡಹೊಳೆ: ಭೀಕರ ಅಪಘಾತ | ಮೂವರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರ ಗಾಯ

13/02/2021

ನೆಲ್ಯಾಡಿ:  ಕೆಎಸ್ಸಾರ್ಟಿಸಿ ಬಸ್ ಮತ್ತು ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಗುಂಡ್ಯ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಒಟ್ಟು ಐವರಿಗೆ ಗಂಭೀರ ಗಾಯವಾಗಿದ್ದು,  ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಕೊಕ್ಕಡದ ಪಟ್ರಮೆಯ ನಿವಾಸಿಗಳು ಎಂದು ತಿಳಿದು ಬಂದಿದೆ.

ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,  ಬಸ್ ಗೆ ಕೂಡ ಹಾನಿಯಾಗಿದೆ. ಘಟನೆ ಸಂಬಂಧ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ