“ರೇಣುಕಾಚಾರ್ಯ ತಮ್ಮ ಇಬ್ಬರು ಮಕ್ಕಳಿಗೂ ನಕಲಿ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ” - Mahanayaka
1:15 AM Wednesday 11 - December 2024

“ರೇಣುಕಾಚಾರ್ಯ ತಮ್ಮ ಇಬ್ಬರು ಮಕ್ಕಳಿಗೂ ನಕಲಿ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ”

m lakshman
24/03/2022

ಮೈಸೂರು: ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ತಮ್ಮ ಇಬ್ಬರು ಮಕ್ಕಳಿಗೆ ಎಸ್​ಸಿ ಜಾತಿ ಪ್ರಮಾಣಪತ್ರ ಕೊಡಿಸಿ, ಸರ್ಕಾರದ ಸವಲತ್ತನ್ನು ಪಡೆದಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಪಡೆದಿರುವ ಎಲ್ಲಾ ದಾಖಲೆಗಳನ್ನು ಸಿಎಂಗೆ ಕಳುಹಿಸಿದ್ದೇನೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಜಗತ್ಪ್ರಸಿದ್ಧ. ಮಣ್ಣಿನ ಮೇಲೆ ದೋಣಿ ನಡೆಸಿರುವ ವ್ಯಕ್ತಿ. ಈ ವ್ಯಕ್ತಿಗೆ ಇಬ್ಬರು ಮಕ್ಕಳಿದ್ದಾರೆ. ಪುತ್ರ ಅಮೆರಿಕಾದಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಾರೆ, ಪುತ್ರಿ ಬೆಂಗಳೂರಿನಲ್ಲಿ ಪಿಯುಸಿ ಓದುತ್ತಿದ್ದಾರೆ. ರೇಣುಕಾಚಾರ್ಯ ಇಬ್ಬರಿಗೂ ಎಸ್​ಸಿ ಜಾತಿ ಪ್ರಮಾಣಪತ್ರ ಕೊಡಿಸಿದ್ದಾರೆ ಎಂದರು.

ಎಸ್​ಸಿ, ಎಸ್​ಟಿಯ ಸೌಲಭ್ಯಗಳನ್ನು ಬಿಜೆಪಿ ಮುಖಂಡರು ಕಸಿಯುತ್ತಿದ್ದಾರೆ. ಶಾಲಾ ದಾಖಲಾತಿಯಲ್ಲಿ ಲಿಂಗಾಯತ ಎಂದು ನಮೂದಾಗಿದೆ. ರೇಣುಕಾಚಾರ್ಯ ಅವರ ಅಣ್ಣ ಎಂ.ಪಿ.ದಾರಕೇಶ್ವರಯ್ಯ ಕೂಡ ಎಸ್​ಸಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು. ಇದೇ ಕೆಲಸ ಕಾಂಗ್ರೆಸ್​ನವರು ಮಾಡಿದ್ರೆ ಸುಮ್ಮನೆ ಇರುತ್ತಿದ್ರಾ? ಎಂದು ಅವರು ಪ್ರಶ್ನಿಸಿದರು.

ಇದು ಕ್ರಿಮಿನಲ್​ ಮೊಕದ್ದಮೆಯಗಿದ್ದು, ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ಮೌನವಹಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಹಾಗೂ ಎಸ್​ಸಿ, ಎಸ್​ಟಿ ಆಯೋಗಕ್ಕೆ ದೂರು ನೀಡುತ್ತೇವೆ. ಎಂ.ಪಿ.ರೇಣುಕಾಚಾರ್ಯ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದರ ಬಗ್ಗೆ ತನಿಖೆಯಾಗಬೇಕು. ರೇಣುಕಾಚಾರ್ಯ ರಾಜೀನಾಮೆ ನೀಡಬೇಕು. ಬಿಜೆಪಿಯ ದಲಿತ ನಾಯಕರು ಏನು ಮಾಡುತ್ತಿದ್ದೀರಿ? ನಿಮ್ಮ ಸಮುದಾಯಕ್ಕೆ ಅನ್ಯಾಯ ಆಗ್ತಿದ್ರೂ ಕಣ್ಮುಚ್ಚಿ ಕುಳಿತಿದ್ದೀರಿ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು
ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ: ಬಿಬಿಎಂಪಿ ಉಪ ಆಯುಕ್ತರ ವಿರುದ್ಧ ಪ್ರಕರಣ ದಾಖಲು

ಹಿಜಾಬ್ ನಿಷೇಧ ಪ್ರಕರಣ: ತುರ್ತು ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಕಾರ

ಬೈಕ್‌ಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರ ದಾರುಣ ಸಾವು

ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಇತ್ತೀಚಿನ ಸುದ್ದಿ