ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿಗಣತಿ ವರದಿ ಚರ್ಚೆಗಿಡುತ್ತೇನೆ | ಸಿದ್ದರಾಮಯ್ಯ ಹೇಳಿಕೆ
ಮೈಸೂರು: ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿಗಣತಿ ವರದಿಯನ್ನು ಪಡೆದು ಚರ್ಚೆಗೆ ಇಡುವುದಾಗಿ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ನಾನು ಅಧಿಕಾರದಲ್ಲಿದ್ದಾಗ ಜಾತಿ ಗಣತಿ ಮಾಡಿಸಿದೆ. ನಂತರ ಬಂದ ಸರ್ಕಾರಗಳು ಗಣತಿ ವರದಿಯನ್ನು ಪಡೆಯಲೇ ಇಲ್ಲ ಎಂದು ಅವರು ಹೇಳಿದರು.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಾತಿಜನಗಣತಿ ಇಲ್ಲದೆ ಯಾವ ಜಾತಿ, ಸಮಾಜ ಬಡತನದಲ್ಲಿದೆ ಎಂದು ಗೊತ್ತಾಗುತ್ತಿಲ್ಲ. ಎಲ್ಲ ಹಂತಗಳಲ್ಲೂ ಮೀಸಲಾತಿಯನ್ನು ವಿರೋಧಿಸಿದ ಬಿಜೆಪಿಯು ಹಿಂದುಳಿದ ವರ್ಗಗಳ ಪರವಾಗಿ ಇಲ್ಲ ಎಂದು ಅವರು ಹೇಳಿದರು.
ಇನ್ನೂ ಮೇಕೆದಾಟು ಯೋಜನೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಸರ್ಕಾರಕ್ಕೆ ಬದ್ಧತೆ ಇದ್ದರೆ ಕೇಂದ್ರ ಜಲನ್ಯಾಯ ಮಂಡಳಿಯ ಅನುಮತಿ ಪಡೆದು ಮೊದಲು ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ತಮಿಳುನಾಡಿಗೆ ಪತ್ರ ಬರೆದು ಅನುಮತಿ ಕೇಳುತ್ತೇವೆ ಎನ್ನುವುದು ಸರಿಯಲ್ಲ ಎಂದು ಪ್ರತಿಪಾದಿಸಿದರು.
ಇನ್ನಷ್ಟು ಸುದ್ದಿಗಳು…
ಖ್ಯಾತ ಕ್ರಿಕೆಟಿಗನ ಆರೋಗ್ಯ ಸ್ಥಿತಿ ಗಂಭೀರ | ಜೀವ ರಕ್ಷಕ ಸಾಧನ ಅಳವಡಿಕೆ
ಬಿಜೆಪಿ ಮುಖಂಡನನ್ನು ಕಾರಿನ ಡಿಕ್ಕಿಯಲ್ಲಿ ಹಾಕಿ, ಬೆಂಕಿ ಹಚ್ಚಿ ಭೀಕರ ಹತ್ಯೆ!
ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಯಾರು? | ತಡ ರಾತ್ರಿ ನಡೆದ್ದದ್ದೇನು?
ಪ್ರೇಮ ನಿವೇದನೆ ತಿರಸ್ಕರಿಸಿದ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದರೆ ಹುಷಾರ್: ಕೇರಳ ಸಿಎಂ ಪಿಣರಾಯಿ ವಿಜಯನ್ ಎಚ್ಚರಿಕೆ
ದಿಢೀರ್ ಬೆಳವಣಿಗೆ: ರಾಜೀನಾಮೆಗೆ ಮುಂದಾದ ಸಚಿವ ಆನಂದ್ ಸಿಂಗ್?
ನೀರಜ್ ಚೋಪ್ರಾರನ್ನು ಅನುಕರಿಸಿ ರೋಡಲ್ಲಿ ನಿಂತು ಈಟಿ ಎಸೆದ ರಾಖಿ ಸಾವಂತ್ | ಮುಂದೇನಾಯ್ತು?