ಕಮಲ ಶಾಕ್: ಅಯೋಧ್ಯೆಯ ಬಳಿಕ ಬದರೀನಾಥ್ ನಲ್ಲೂ ಬಿಜೆಪಿಗೆ ಹೀನಾಯ ಸೋಲು
ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಇಂಡಿಯಾ ಮೈತ್ರಿಕೂಟ ಮೇಲುಗೈ ಸಾಧಿಸಿದೆ. ಲೋಕಸಭಾ ಚುನಾವಣೆ ನಡೆದ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದ್ದು ಬಿಜೆಪಿಗೆ ಹಿನ್ನಡೆಯಾಗಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಯ ಮುಖಭಂಗವನ್ನು ಇಲ್ಲಿ ನೆನಪಿಸಲಾಗುತ್ತಿದೆ.
ವಿಧಾನಸಭೆ ಉಪಚುನಾವಣೆಯಲ್ಲಿ ಉತ್ತರಾಖಂಡದ ಆಡಳಿತಾರೂಢ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ. ಹಿಂದೂಗಳ ಪುಣ್ಯ ಕ್ಷೇತ್ರಗಳೆಂದು ಪರಿಗಣಿಸಲಾದ ಬದ್ರಿನಾಥ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ ಅವರು ಗೆಲುವು ಸಾಧಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಿವಸೇನೆಯ (ಯುಬಿಟಿ) ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ, ‘ಜೈಬಾಬಾ ಬದರಿನಾಥ್, ಜೈವಿಕೇತರ ಪಕ್ಷ ಇಲ್ಲೂ ಸೋತಿದೆ’ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲನ್ನು ಉದ್ದೇಶಿಸಿ ಪ್ರಿಯಾಂಕಾ ಪೋಸ್ಟ್ ಮಾಡಿದ್ದಾರೆ.
13 ಕ್ಷೇತ್ರಗಳ ಪೈಕಿ 9ರಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದಿದೆ, 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth