ದಿಲ್ಲಿಯಲ್ಲಿ ಬೈಕ್ ಟ್ಯಾಕ್ಸಿ ನಿಷೇಧವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್: ಶುರುವಾಯ್ತು ಹೊಸ ತಲೆಬೇನೆ
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಬದಿಗಿಟ್ಟ ಸುಪ್ರೀಂ ಕೋರ್ಟ್, ದಿಲ್ಲಿ ನಗರದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸುವ ದಿಲ್ಲಿ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ದಿಲ್ಲಿಯ ನಗರದಲ್ಲಿದ್ದ ಬಾಡಿಗೆ ಬೈಕ್ ಸವಾರರು ಈಗ ತಮ್ಮ ಕಾರ್ಯಾಚರಣೆಯನ್ನು ನೋಯ್ಡಾ, ಗುರುಗ್ರಾಮ್ ಮತ್ತು ಗಾಜಿಯಾಬಾದ್ ನಂತಹ ಇತರ ನಗರಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ.
ಉಬರ್ ಮತ್ತು ರಾಪಿಡೊದಂತಹ ಅಗ್ರಿಗೇಟರ್ಸ್ ನಿರ್ವಹಿಸುವ ಬೈಕ್ ಟ್ಯಾಕ್ಸಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ದೆಹಲಿ ಹೈಕೋರ್ಟ್ ಮೇ 26 ರಂದು ದೆಹಲಿ ಸರ್ಕಾರಕ್ಕೆ ಸೂಚಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಈ ಆದೇಶವನ್ನು ತಡೆಹಿಡಿದು ಹೊಸ ನೀತಿಯನ್ನು ರೂಪಿಸುವವರೆಗೆ ಟ್ಯಾಕ್ಸಿಗಳು ನಗರದಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ಕುರಿತು ತನ್ನ ನೋವು ವ್ಯಕ್ತಪಡಿಸಿರುವ ದೆಹಲಿಯ ಬೈಕ್ ಟ್ಯಾಕ್ಸಿ ಸವಾರ ಆನಂದ್ ರೈ, ದೆಹಲಿ ಸರ್ಕಾರದ ದಬ್ಬಾಳಿಕೆಯಿಂದಾಗಿ ಬೈಕ್ ಟ್ಯಾಕ್ಸಿಗಳನ್ನು ಓಡಿಸುವುದು ತುಂಬಾ ಕಷ್ಟಕರವಾಗಿತ್ತು. ಆ ಸಮಯದಲ್ಲಿ ನಾವು ಗುರುಗ್ರಾಮ್, ನೋಯ್ಡಾ ಮತ್ತು ಗಾಜಿಯಾಬಾದ್ ನಲ್ಲಿ ಬೈಕ್ ಸವಾರಿಯ ಬಾಡಿಗೆಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದೆವು, ಆದರೆ ಅಲ್ಲಿಯೂ ಪೊಲೀಸರು ನಮಗೆ ಕಿರುಕುಳ ನೀಡುತ್ತಿದ್ದರು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw