ಸೋಮಣ್ಣನ ಆಡಿಯೋ ಬಿಡುಗಡೆ ಮಾಡ್ತಿನಿ: ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿದ ಸ್ವಪಕ್ಷದ ರುದ್ರೇಶ್
ಚಾಮರಾಜನಗರ: ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚಾಮರಾಜನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಚಾಮರಾಜನಗರ ಟಿಕೆಟ್ ಆಕಾಂಕ್ಷಿ ರುದ್ರೇಶ್ ಅವರು ಸೋಮಣ್ಣ ವಿರುದ್ಧ ಹರಿಹಾಯ್ದಿದ್ದಾರೆ.
ಚಾಮರಾಜನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತಾಡಿ, ರಾಮನಗರದಲ್ಲಾಗಲಿ ಹಾಗೂ ಚಾಮರಾಜನಗರದಲ್ಲಾಗಲಿ ಸೋಮಣ್ಣ ಅವರು ಪಕ್ಷ ಸಂಘಟನೆಗೆ ಒಂದಿಂಚೂ ಶ್ರಮಿಸಿಲ್ಲ, ಅವರ ತವರಲ್ಲೇ ಅವರು ಪಕ್ಷ ಸಂಘಟಿಸಿಲ್ಲ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಪ್ರಚಾರಕ್ಕೆ ಬಂದಿಲ್ಲ ಈ ರೀತಿ ವ್ಯಕ್ತಿಗೆ ಎರಡು ಟಿಕೆಟ್ ಕೊಟ್ಟಿದ್ದಾರೆ ಎಂದು ಹರಿಹಾಯ್ದರು.
ಪಕ್ಷ ಸಂಘಟನೆಗೆ ಕರೆದರೇ ನನಗೂ ಬಿಜೆಪಿಗೂ ಸಂಬಂಧವಿಲ್ಲ, ನಾನು ಸರ್ಕಾರದ ಸಚಿವ ಎಂದು ಹೇಳುತ್ತಿದ್ದರು. ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದ ಸೋಮಣ್ಣ ಅವರು ಕೆಲ ಷರತ್ತುಗಳಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ, ಚಾಮರಾಜನಗರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲು ಸೋಮಣ್ಣ ಅವರು ಕಾರಣ, ಈಗ ಸೋಮಣ್ಣ ಅವರೇ ಅಭ್ಯರ್ಥಿಯಾಗಿರುವುದು ವಿಪರ್ಯಾಸ ಎಂದು ಬೇಸರ ಹೊರಹಾಕಿದರು.
ಕಳೆದ ಸಾರಿ ಪ್ರೊ.ಮಲ್ಲಿಕಾರ್ಜುನಪ್ಪ ಸೋಲಲು ಸೋಮಣ್ಣ ಕಾರಣ, ಇದಕ್ಕೆ ಸಂಬಂಧಿಸಿದಂತೆ ಆಡಿಯೋ ಕೂಡ ಇದೆ, ಚಾಮರಾಜನಗರದಲ್ಲಿ ಎಲ್ಲರನ್ನೂ ಸೋಲಿಸಿ ಅವರೂ ಮಾತ್ರ ಗೆಲ್ಲುತ್ತಾರೆ, ಗೆದ್ದ ಬಳಿಕ ಸಿದ್ದರಾಮಯ್ಯ ಜೊತೆ ಕೈ ಜೋಡಿಸಿ ಕಾಂಗ್ರೆಸ್ ಗೆ ಹೋಗುತ್ತಾರೆಂಬ ಅನುಮಾನ ಇದೆ ಗಂಭೀರ ಆರೋಪ ಹಾಕಿದರು.
ಸೋಮಣ್ಣ ಕಾಂಗ್ರೆಸ್ ಗೆ ಹೋಗದಂತೆ ಈಗಲೇ ಹೈಕಮಾಂಡ್ ಬಿಗಿ ಮಾಡಬೇಕಿದೆ. ಮುಂದೊಂದು ದಿನ ಪಕ್ಷಕ್ಕೆ ಕೆಟ್ಟ ದಿನ ಬರಬಾರದು, ಅವರು ಮಾತನಾಡುವುದಲ್ಲ ಬರೀ ಸುಳ್ಳು, ಸುಳ್ಳು ಸೋಮಣ್ಣ ಎಂತಲೇ ಜನರು ಕರೆದಿದ್ದಾರೆ ಎಂದು ಲೇವಡಿ ಮಾಡಿದರು.
ಪಕ್ಷದ ಮಹಾನ್ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧವಾಗಿ ಕಾರ್ಯಕರ್ತರ ಜೊತೆ ಮಾತನಾಡುತ್ತಾರೆ. ಅದರ ಆಡಿಯೋಗಳು ನನ್ನ ಬಳಿ ಇದೆ, ಸಿದ್ಧಗಂಗಾಶ್ರೀಗಳ ವಿರುದ್ಧವಾಗಿಯೂ ಮಾತನಾಡಿದ್ದಾರೆ, ಅದರ ಆಡಿಯೋ ಕೂಡ ಇದೆ. ಶೀಘ್ರದಲ್ಲೇ ಎಲ್ಲವನ್ನೂ ಬಿಡುಗಡೆ ಮಾಡುತ್ತೇನೆ ಎಂದು ರುದ್ರೇಶ್ ಬಾಂಬ್ ಸಿಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw