ಫಲಿತಾಂಶದ ಬಳಿಕ ಬಿಜೆಪಿ ಅಭ್ಯರ್ಥಿಗೆ ಲಘು ಹೃದಯಾಘಾತ! - Mahanayaka
4:20 PM Thursday 12 - December 2024

ಫಲಿತಾಂಶದ ಬಳಿಕ ಬಿಜೆಪಿ ಅಭ್ಯರ್ಥಿಗೆ ಲಘು ಹೃದಯಾಘಾತ!

ravindra
13/05/2023

ಬೆಂಗಳೂರು: ವಿಧಾನ ಸಭಾ ಚುನಾವಣೆ ಫಲಿತಾಂಶದ ಬಳಿಕ ವಿಜಯ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವೀಂದ್ರ ಅವರಿಗೆ ಲಘು ಹೃದಯಾಘಾತವಾಗಿದೆ.

ವಿಜಯ ನಗರ ಕ್ಷೇತ್ರದಲ್ಲಿ  ಪ್ರಬಲ ಹಿಡಿತ ಸಾಧಿಸಿರುವ ಎಂ. ಕೃಷ್ಣಪ್ಪ ಎದುರು ಬಿಜೆಪಿಯ ರವೀಂದ್ರ ಅವರನ್ನು ಕಣಕ್ಕಿಳಿಸಲಾಗಿತ್ತು. ಜಿದ್ದಾಜಿದ್ದಿನ ಪೈಪೋಟಿಯ ಬಳಿಕ ಬಿಜೆಪಿ ಅಭ್ಯರ್ಥಿ ಪರಾಭವಗೊಂಡಿದ್ದಾರೆ.

ಇದಾದ ಬಳಿಕ ಅವರಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆನ್ನಲಾಗಿದೆ. ಸದ್ಯ ರವೀಂದ್ರ ಅವರು ಮನೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ