ವಯನಾಡ್ ಬಳಿಕ ಹಿಮಾಚಲ ಪ್ರದೇಶದಲ್ಲೂ ಭೀಕರ ಮೇಘಸ್ಫೋಟ: 39 ಜನ ಕಣ್ಮರೆ
ಈ ಬಾರಿಯ ಮಳೆಗಾಲ ಅತ್ಯಂತ ಭೀಕರ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಕೇರಳದ ವಯನಾಡಿನಲ್ಲಿ ಮೇಘಸ್ಫೋಟದಿಂದಾಗಿ ಇನ್ನೂರಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಕೂಡ ಮೇಘಸ್ಫೋಟ ನಡೆದಿದ್ದು. 19 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ, 35ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದಾರೆ.
ಕುಲುವಿನ ನಿರ್ಮಲ್ ನಲ್ಲಿ ಸುಮಾರು 19 ಜನರು ಕೊಚ್ಚಿ ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅದರಲ್ಲೂ ಭಾರಿ ಮಳೆ ಪರಿಣಾಮ ಮಂಡಿ ಜಿಲ್ಲೆಯಲ್ಲಿ ಹಲವು ಮನೆ ಮತ್ತು ಜನರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಘಟನೆಯ ಬೆನ್ನಲ್ಲೇ 35 ಜನರು ಕಣ್ಮರೆಯಾಗಿದ್ದಾರೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಮೇಘಸ್ಫೋಟದಿಂದಾಗಿ ಮೂರು ಅಂತಸ್ತಿನ ಮನೆಯೊಂದು ಕುಸಿದು ಬಿದ್ದು ಕೊಚ್ಚಿ ಹೋಗಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ದೌಡಾಯಿಸಿದೆ. ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸಂಜೀವ್ ಗಾಂಧಿ ಸಹಿತ ಹಲವು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth