ಪಹಲ್ಗಾಮ್ ದಾಳಿ: ನಾಲ್ವರು ಭಯೋತ್ಪಾದಕರ ಫೋಟೋ ಬಿಡುಗಡೆ

ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಲೈವ್ ಅಪ್ ಡೇಟ್ ಇಲ್ಲಿ ನೀಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ಉಗ್ರರ ರೇಖಾಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಫೋಟೋ ಬಿಡುಗಡೆ ಮಾಡಲಾಗಿದೆ.
ಟಿವಿ ವರದಿಗಳಲ್ಲಿ ಭಯೋತ್ಪಾದಕರ ಈ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ. ಪಿಟಿಐ ಪ್ರಕಾರ, ಭಯೋತ್ಪಾದಕರು “ಮೂಸಾ, ಯೂನಸ್ ಮತ್ತು ಆಸಿಫ್” ಎಂಬ ಕೋಡ್ ನೇಮ್ ಅನ್ನು ಬಳಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿರುವ ಸುಂದರ ಪ್ರದೇಶವಾದ ಬೈಸರನ್ ಕಣಿವೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಮರಳಿದ್ದಾರೆ. ಅವರು ಎನ್ ಎಸ್ ಎ ಅಜಿತ್ ದೋವಲ್ ಮತ್ತು ಇಎಎಂ ಅವರೊಂದಿಗೆ ಪ್ರಮುಖ ಸಭೆ ನಡೆಸಿದ್ದು, ಮುಂದಿನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: