ಪ್ರೈಮ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ - Mahanayaka

ಪ್ರೈಮ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

prime test
18/12/2021

ಒಡಿಶಾ: ಭಾರತವು ಪರಮಾಣು ಸಾಮರ್ಥ್ಯ ಕಾರ್ಯತಂತ್ರ ಹೊಂದಿರುವ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಬಾಲಾಸೋರ್‌ನಿಂದ ಯಶಸ್ವಿಯಾಗಿ ಪರೀಕ್ಷಿಸಿದೆ.

ಈ ಕ್ಷಿಪಣಿಯು ಸಾವಿರದಿಂದ 2 ಸಾವಿರ ಕಿಲೋ ಮೀಟರ್ ದೂರದವರೆಗೆ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದ್ದು, ಪರೀಕ್ಷಾರ್ಥ ಉಡಾವಣೆಯ ಯಶಸ್ಸಿನ ಬಗ್ಗೆ ಸರ್ಕಾರದ ಅಧಿಕಾರಿಗಳೇ ಖಚಿತಪಡಿಸಿದ್ದಾರೆ.

ಕಳೆದ ಬಾರಿ ಈ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಜೂನ್ 28ರಂದು ಮಾಡಲಾಗಿತ್ತು. ಕ್ಷಿಪಣಿಯ ಅಭಿವೃದ್ಧಿಯು ಮುಕ್ತಾಯದ ಹಂತದಲ್ಲಿದ್ದು ಭಾರತೀಯ ಸೇನೆಯ ಮೂರೂ ಪಡೆಗಳ ಕಾರ್ಯತಂತ್ರಗಳಿಗೆ ಸದ್ಯದಲ್ಲಿಯೇ ಕಾರ್ಯನಿರ್ವಹಣೆಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡಿಗರ ಘನತೆ ಎತ್ತಿಹಿಡಿಯ ಬೇಕಾದವರೇ ಏನೂ ನಡೆದಿಲ್ಲ ಎಂಬಂತಿದ್ದಾರೆ | ಯುವ ನಾಯಕ ಸಚಿನ್ ಸರಗೂರು

ರಾಷ್ಟ್ರಭಕ್ತರ ಪ್ರತಿಮೆ ಧ್ವಂಸ; ಪುಂಡರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ, ಕಾನೂನು ಕ್ರಮಕೈಗೊಳ್ಳಿ:  ಸಿಎಂಗೆ ಸಿದ್ದರಾಮಯ್ಯ ಮನವಿ

“ರೇಪ್ ತಡೆಯಲು ಆಗದಿದ್ದರೆ, ಮಲಗಿ ಎಂಜಾಯ್ ಮಾಡಬೇಕು” | ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ರಮೇಶ್ ಕುಮಾರ್

ಇತ್ತೀಚಿನ ಸುದ್ದಿ