ಅಗ್ನಿಸಾಕ್ಷಿ’ ಸೀರಿಯಲ್ ನಟ ಸಂಪತ್ ಜಯರಾಮ್ ಇನ್ನಿಲ್ಲ
ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 22ರಂದು ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು. ಇತ್ತೀಚಿಗೆ `ಬಾಲಾಜಿ ಫೋಟೋ ಸ್ಟುಡಿಯೋ’ ಸಿನಿಮಾದಲ್ಲಿ ಸಂಪತ್ ಗಮನ ಸೆಳೆದಿದ್ದರು. ಆದರೆ ಚಿತ್ರರಂಗದಲ್ಲಿ ಸೂಕ್ತ ಅವಕಾಶ ಸಿಗದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ನಟ ಸಂಪತ್ ಅವರು ಇತ್ತೀಚಿಗೆಷ್ಟೇ ಮದುವೆಯಾಗಿದ್ದರು. ಒಂದು ವರ್ಷದ ಹಿಂದೆ ಮದುವೆಯಾಗಿದ್ದ ನಟ ಇದೀಗ ಇಹಲೋಕ ತ್ಯಜಿಸಿರುವುದು ಚಿತ್ರರಂಗದ ಸ್ನೇಹಿತರು, ಆಪ್ತರು ಕಂಬನಿ ಮಿಡಿದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw