ನಮ್ಮ ಸರ್ಕಾರ ಬಂದ್ರೆ ಅಗ್ನಿವೀರ್ ಯೋಜನೆ ರದ್ದು: ಅಖಿಲೇಶ್ ಯಾದವ್ ಹೇಳಿಕೆ
“ನಾವು ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಲಾಗುವುದು” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ ಒಂದು ದಿನದ ನಂತರ ಅಖಿಲೇಶ್ ಯಾದವ್ ಈ ಟ್ವೀಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವಾಗ ಸಮಾಜವಾದಿ ಪಕ್ಷವು ಒಂದು ಘಟಕವಾಗಿರುವ ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಅಲ್ಪಾವಧಿಯ ಮಿಲಿಟರಿ ನೇಮಕಾತಿ ಯೋಜನೆ ಅಗ್ನಿವೀರ್ ಅನ್ನು ರದ್ದುಗೊಳಿಸುವುದಾಗಿ ಯಾದವ್ ಪದೇ ಪದೇ ಭರವಸೆ ನೀಡಿದ್ದರು. ಈಗ ಮತ್ತೆ ಅದೇ ಭರವಸೆಯನ್ನು ನೀಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, “ನಾವು ಅಧಿಕಾರಕ್ಕೆ ಬಂದ ತಕ್ಷಣ, ದೇಶದ ಭದ್ರತೆಗೆ ರಾಜಿ ಮಾಡಿಕೊಳ್ಳುವ ಮತ್ತು ಸೈನಿಕರ ಭವಿಷ್ಯದ ಜೊತೆ ಆಟವಾಡುವ ಅಲ್ಪಾವಧಿಯ ‘ಅಗ್ನಿವೀರ್’ ಸೇನಾ ನೇಮಕಾತಿಯನ್ನು 24 ಗಂಟೆಗಳಲ್ಲಿ ರದ್ದುಗೊಳಿಸಲಾಗುವುದು” ಎಂದು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth