ಲಂಚ ತಿಂದು ಲೋಕಾಯುಕ್ತ ಕೈಗೆ ಸಿಕ್ಕಿ ಬಿದ್ದ ಕೃಷಿ ಅಧಿಕಾರಿಗಳು!
ಕೃಷಿ ಇಲಾಖೆ ಅಧಿಕಾರಿಗಳಿಬ್ಬರು ಹಾಗೂ ಹೊರಗುತ್ತಿಗೆ ಡಿ.ಗ್ರೂಪ್ ನೌಕರನೋರ್ವ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಕೃಷಿ ಇಲಾಖೆ ಸಹಾಯಕ ನಿದೇಶಕ ಪ್ರವೀಣ್ಕುಮಾರ್, ತಾಂತ್ರಿಕ ಮತ್ತು ಕೃಷಿ ಅಧಿಕಾರಿ ಸತೀಶ್ ಹಾಗೂ ಡಿ.ಗ್ರೂಪ್ ನೌಕರ ಅರುಣ್ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದವರು.
ಗುಂಡ್ಲುಪೇಟೆ ತಾಲೂಕಿನ ಕೃಷಿ ಇಲಾಖೆಗೆ ಹತ್ತಿಬೀಜ ಸರಬರಾಜು ಮಾಡುವ ಕಂಪನಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಎಸ್.ಆರ್.ಟ್ರೇಡರ್ಸ್ ಮಾಲೀಕ ಕುಮಾರಸ್ವಾಮಿ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ನೇತೃತ್ವದ ತಂಡ ಎರಡುವರೆ ಲಕ್ಷ ನಗದು ಪಡೆಯುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಇಬ್ಬರು ಅಧಿಕಾರಿಗಳು ಸಿಕ್ಕಿಬಿದ್ದಾರೆ.
ಲೋಕಾಯುಕ್ತ ಪೊಲೀಸರು ಈ ಸಂಬಂಧ ಆರೋಪಿತರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ನಂತರ ಕೇಸು ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw