ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ - Mahanayaka
4:10 AM Wednesday 13 - November 2024

ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ

agriculture department jobs
24/09/2024

KPSC AO & AAO Recruitment 2024 — ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ವತಿಯಿಂದ ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಹಾಗೂ ಕೃಷಿ ಸಹಾಯಕ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತಹ ಈ ಹುದ್ದೆಗಳ ನೇಮಕಾತಿಯ ಕುರಿತು ಅರ್ಹತೆಗಳು, ಹುದ್ದೆಗಳ ಮಾಹಿತಿ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕುರಿತು ಹಾಗೂ ಇತರೆ ನೇಮಕಾತಿಯ ಸಂಪೂರ್ಣ ವಿವರವನ್ನು ಈ ಕೆಳಗಿನ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿರಿ.

ಹುದ್ದೆಗಳ ವಿವರ :

ಕೃಷಿ ಇಲಾಖೆಯಲ್ಲಿ ಒಟ್ಟು 945 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅದರಲ್ಲಿ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಗೊತ್ತೆಗಳ ವಿಂಗಡಣೆಯು ಈ ಕೆಳಗಿನಂತಿದೆ.




* ಕೃಷಿ ಅಧಿಕಾರಿ – 128 ಹುದ್ದೆಗಳು
* ಸಹಾಯಕ ಕೃಷಿ ಅಧಿಕಾರಿ – 817 ಹುದ್ದೆಗಳು

ಶೈಕ್ಷಣಿಕ ಅರ್ಹತೆ – ಕೃಷಿ ಅಧಿಕಾರಿ ಮತ್ತು ಕೃಷಿ ಸಹಾಯಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೃಷಿ ವಿಷಯದಲ್ಲಿ ಪದವಿ ಮುಗಿಸಿರಬೇಕು. ಗಮನಿಸಬೇಕಾದ ವಿಷಯವೇನೆಂದರೆ ಒಟ್ಟು ಹುದ್ದೆಗಳಲ್ಲಿ ಶೇಕಡ 15 ರಷ್ಟು ಹುದ್ದೆಗಳನ್ನು ಕೃಷಿ ವಿಷಯದಲ್ಲಿ ಬಿ ಟೆಕ್ ಮಾಡಿದವರಿಗೆ ಮೀಸಲಿಡಲಾಗಿದೆ.

ವಯೋಮಿತಿ:

ಕರ್ನಾಟಕ ಸರ್ಕಾರದ ಒಂದು ಬಾರಿ ವಯೋಮಿತಿ ಸಡಿಲಿಕೆ ನಿಯಮಗಳ ಅನ್ವಯ ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ಹೊಂದಿರಬೇಕು. ಪ್ರವರ್ಗ 2a 2ಬಿ, 3 ಎ, 3 ಬಿ ವರ್ಗದ ಅಭ್ಯರ್ಥಿಗಳಿಗೆ 41 ವರ್ಷ. ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಹಾಗೂ ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿ 43 ವರ್ಷ.

ಅರ್ಜಿ ಶುಲ್ಕ:

• ಸಾಮಾನ್ಯ ವರ್ಗದ ಅಭ್ಯರ್ಥಿಗಳು ನೇಮಕಾತಿಗೆ ಅರ್ಜಿ ಸಲ್ಲಿಸಲು 600 ಪಾವತಿಸಬೇಕು.
* ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು 300 ರೂಪಾಯಿ ಪಾವತಿಸಬೇಕು.
* ಮಾಜಿ ಸೈನಿಕ ಅಭ್ಯರ್ಥಿಗಳು 50 ರೂಪಾಯಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು, ಪ್ರವರ್ಗ 1 ವರ್ಗದವರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ನೇಮಕಾತಿ ಅರ್ಜಿ ಸಲ್ಲಿಕೆಯ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ – 07 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಮುಕ್ತಾಯಗೊಳ್ಳುವ ದಿನಾಂಕ – 07 ಸೆಪ್ಟೆಂಬರ್ 2024

ಅರ್ಜಿ ಹೇಗೆ ಸಲ್ಲಿಸಬೇಕು?

ಕೃಷಿ ಇಲಾಖೆಯ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಜಾಲತಾಣ https://kpsc.kar.nic.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ