ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ ಬಸ್ ವ್ಯತ್ಯಯ
ಉಡುಪಿ: ರಾಷ್ಟ್ರೀಯಹೆದ್ದಾರಿ 169 ಎ ಆಗುಂಬೆಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆ, ಸೆಪ್ಟಂಬರ್ 30 ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.
ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ ಬಸ್ ವ್ಯತ್ಯಯ:
ಉಡುಪಿ: ಪ್ರಧಾನ ಮಂತ್ರಿಗಳು ಸೆಪ್ಟಂಬರ್ 2 ರಂದು ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಹಿನ್ನಲೆ, ಸದರಿ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲಾಗಿರುತ್ತದೆ.
ಆದ್ದರಿಂದ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
ಜಮಾಬಂಧಿ ಕಾರ್ಯಕ್ರಮ:
ಉಡುಪಿ:ಆರೂರು ಗ್ರಾಮ ಪಂಚಾಯತ್ ಪ್ರಸಕ್ತ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂಧಿ ಕಾರ್ಯಕ್ರಮವು ಸೆಪ್ಟಂಬರ್ 2 ರಂದು ಬೆಳಗ್ಗೆ 10:30ಕ್ಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka