ನಿತೀಶ್ ಕುಮಾರ್ ಪ್ರಧಾನಿ ಸ್ಪರ್ಧಿಯಲ್ಲ: ‘ಬಿಜೆಪಿ ಮುಕ್ತ ದೇಶ’ಕ್ಕಾಗಿ ನಿತೀಶ್ ರಣತಂತ್ರ
2024 ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಕೀಕೃತ ವಿರೋಧ ಪಕ್ಷವನ್ನು ರೂಪಿಸುವ ಪ್ರಯತ್ನಗಳ ಮಧ್ಯೆ, ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಅವರು ನಿತೀಶ್ ಕುಮಾರ್ ಪ್ರಧಾನಿ ಸ್ಪರ್ಧಿಯಲ್ಲ. ಅವರು ‘ಬಿಜೆಪಿ ಮುಕ್ತ ರಾಷ್ಟ್ರ’ ನಿರ್ಮಿಸಲು ಮಾತ್ರ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
‘ನಿತೀಶ್ ಕುಮಾರ್ ಅವರು ಪ್ರಧಾನಿ ಹುದ್ದೆಗೆ ಸ್ಪರ್ಧಿಯಲ್ಲ. ನಿತೀಶ್ ಕುಮಾರ್ ಬಿಜೆಪಿ ಮುಕ್ತ ರಾಷ್ಟ್ರವನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ವಿರೋಧ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ನಿರತರಾಗಿದ್ದಾರೆ.
ಚುನಾವಣೆಯ ನಂತರ ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಪ್ರಧಾನಿ ಯಾರಾಗಬೇಕೆಂದು ನಿರ್ಧರಿಸುತ್ತವೆ” ಎಂದು ಲಾಲನ್ ಸಿಂಗ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw