ಏರ್‌ಪೋರ್ಟ್‌ ನಲ್ಲಿ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್‍ಗೆ 20 ವರ್ಷ ಜೈಲು ಶಿಕ್ಷೆ - Mahanayaka
1:44 AM Tuesday 24 - December 2024

ಏರ್‌ಪೋರ್ಟ್‌ ನಲ್ಲಿ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್‍ಗೆ 20 ವರ್ಷ ಜೈಲು ಶಿಕ್ಷೆ

adithya rav
17/03/2022

ಮಂಗಳೂರು: ಮಂಗಳೂರಿನ ಏರ್‌ಪೋರ್ಟ್‌ ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಆದಿತ್ಯ ರಾವ್‍ಗೆ ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯ ಪ್ರತ್ಯೇಕ ಎರಡು ಶಿಕ್ಷೆ ಪ್ರಮಾಣವನ್ನು ವಿಧಿಸಿ ತೀರ್ಪು ಪ್ರಕಟಿಸಿದೆ.

2020ರ ಜ. 20ರಂದು ಮಂಗಳೂರಿನ ಏರ್‌ಪೋರ್ಟ್‌ ಗೆ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಪ್ರತ್ಯೇಕ ಎರಡು ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಒಂದು ಸೆಕ್ಷನ್‍ ನಡಿ 20 ವರ್ಷ ಜೈಲು ಮತ್ತು 10 ಸಾವಿರ ರೂ. ದಂಡ, ಮತ್ತೊಂದು ಸೆಕ್ಷನ್‍ನಡಿ 5 ವರ್ಷ ಜೈಲು ಹಾಗೂ10 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಆದಿತ್ಯ ರಾವ್, ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರನಾಗಿದ್ದ. 2018ರಲ್ಲಿ ಬೆಂಗಳೂರು ಏರ್‌ಪೋರ್ಟ್‌ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ಅರ್ಜಿ ತಿರಸ್ಕೃತಗೊಂಡಿತ್ತು.

ಈತ ಅನೇಕ ಬಾರಿ ಏರ್‌ಪೋರ್ಟ್‌ ಗೆ ಹುಸಿ ಬಾಂಬ್ ಕರೆ ಮಾಡಿದ್ದ. ಬಳಿಕ 2020ರ ಜ. 20ರಂದು ಮಂಗಳೂರು ಏರ್‌ಪೋರ್ಟ್‌ ಗೆ ಬಾಂಬ್ ಇಟ್ಟು, ಜ. 22ರಂದು ಬೆಂಗಳೂರಿನಲ್ಲಿ ಆಪರಾಧಿ ಆದಿತ್ಯರಾವ್‌ ನನ್ನು ಬಂಧಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಿಲ್ಲರ್ ಗೆ ಡಿಕ್ಕಿ ಹೊಡೆದ ಟಿಪ್ಪರ್: ಬೆಂಕಿ ಹತ್ತಿಕೊಂಡು ಚಾಲಕ ಸಜೀವ ದಹನ

ಶಾಲಾ ,ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ

7 ವರ್ಷದ ಬಾಲಕಿಯ ಅತ್ಯಾಚಾರದ ಆರೋಪಿಗಳ ಎನ್ ಕೌಂಟರ್

ಲಾಡ್ಜ್ ನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಮೂವರು ಪತ್ನಿಯರ ಗಂಡ ಭೀಕರ ಹತ್ಯೆ: ವಾಕಿಂಗ್ ಗೆ ಹೋಗಿದ್ದೇ ತಪ್ಪಾಯ್ತೆ?

 

ಇತ್ತೀಚಿನ ಸುದ್ದಿ