ಆಕಳನ್ನು ರಕ್ಷಿಸಲು ಹೋಗಿ ಕಾರು ಪಲ್ಟಿ: ಮಹಿಳೆಯ ದಾರುಣ ಸಾವು
ರಾಯಚೂರು: ಕಾರು ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಬೈಪಾಸ್ ಬಳಿಯಲ್ಲಿ ನಡೆದಿದ್ದು, ರಸ್ತೆಗೆ ಅಡ್ಡವಾಗಿ ಬಂದ ಆಕಳನ್ನು ರಕ್ಷಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಶೈಲಜಾ ಮಲ್ಲಿಕಾರ್ಜುನ(38) ಮೃತಪಟ್ಟ ಮಹಿಳೆಯಾಗಿದ್ದು, ಬೈಪಾಸ್ ಸಮೀಪದ ಅಮರಾವತಿ ಕಾಲೊನಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆ ವೇಳೆ ಕಾರಿನಲ್ಲಿದ್ದ 13 ವರ್ಷದ ಬಾಲಕಿ ಲಕ್ಷ್ಮೀಗೆ ಗಂಭೀರವಾಗಿ ಗಾಯವಾಗಿದೆ. ಕಾರು ಹೈದರಾಬಾದ್ ನಿಂದ ಕೊಪ್ಪಳದ ಚೆನ್ನಳ್ಳಿ ಕ್ಯಾಂಪ್ ಗೆ ಹೊರಟಿತ್ತು ಎನ್ನಲಾಗಿದೆ. ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಘಟನೆ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka