ಅರ್ಧ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹಾಕಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ!
ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ್ದರಿಂದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ನಡೆದಿದೆ.
ವರದಿಯ ಪ್ರಕಾರ, ಸಿಎಂ ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದು, ಈ ವೇಳೆ ದಟ್ಟ ಮಂಜಿನ ಕಾರಣದಿಂದಾಗಿ ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ಅವರು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಮೂರು ಸುತ್ತು ಹಾಕಿದೆ ಎಂದು ಹೇಳಲಾಗಿದೆ.
ಲ್ಯಾಂಡಿಂಗ್ ಕ್ಲಿಯರೆನ್ಸ್ ಇಲ್ಲದ ಕಾರಣ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವ ನಿರ್ಧಾರವನ್ನೂ ಕೈಗೊಳ್ಳಲಾಗಿತ್ತು. ಆದರೆ, ಅರ್ಧಗಂಟೆಯ ಬಳಿಕ ಸಿಎಂ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಾಜ್ಯದ ಜನತೆಗೆ ಬಿಗ್ ಶಾಕ್: ಬೇಸಿಗೆಗೆ ಮುನ್ನವೇ ಏರಿಕೆಯಾಗಲಿದೆಯೇ ವಿದ್ಯುತ್ ಬೆಲೆ?
ಮೊಟ್ಟೆ ಕೊಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ | ಪೇಜಾವರ ಶ್ರೀ
ಎರಡು ಲಾರಿ, ಒಂದು ಕಾರಿನ ನಡುವೆ ಸರಣಿ ಅಪಘಾತ!
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದೆಯಾ? | ಕೊವಿಡ್ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು?
ಗುಡ್ ನ್ಯೂಸ್: ಹೆಲಿಕಾಫ್ಟರ್ ಪತನದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ