ಆಕಾಶದಲ್ಲೇ ವಿಮಾನದ ರೆಕ್ಕೆಗೆ ಹತ್ತಿಕೊಂಡ ಬೆಂಕಿ! - Mahanayaka
1:17 AM Wednesday 11 - December 2024

ಆಕಾಶದಲ್ಲೇ ವಿಮಾನದ ರೆಕ್ಕೆಗೆ ಹತ್ತಿಕೊಂಡ ಬೆಂಕಿ!

sg727
19/06/2022

ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನಕ್ಕೆ ಆಕಾಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಮಾನದ ರೆಕ್ಕೆಯಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ವಿಮಾನವನ್ನು ತಕ್ಷಣವೇ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ.

ಘಟನೆಯಲ್ಲಿ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 185 ಪ್ರಯಾಣಿಕರನ್ನು ಒಳಗೊಂಡ SG727 ಸ್ಪೈಸ್‌ಜೆಟ್ ಪಾಟ್ನಾದಿಂದ ದೆಹಲಿಗೆ ಹಾರಾಟ ಮಾಡುತ್ತಿದ್ದು ಟೇಕಾಫ್ ಆಗಿ ಕೆಲವು ನಿಮಿಷಗಳ ನಂತರ ವಿಮಾನದಿಂದ ಹೊಗೆ ಬರಲು ಶುರುವಾಗಿತ್ತು.

ವಿಮಾನದ ಎಡ ಇಂಜಿನ್ ಒಂದರಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ನಂತರ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿತ್ತು. ಬಹುಶಃ ಪಕ್ಷಿಗಳ ಬಡಿತ ಅಥವಾ ತಾಂತ್ರಿಕ ದೋಷದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.  ಎಲ್ಲಾ 185 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಶೇಖರ್ ಸಿಂಗ್ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇನ್ನೇನು ಅಂತ್ಯಕ್ರಿಯೆ ಮಾಡಬೇಕು ಅನ್ನೋವಷ್ಟರಲ್ಲಿ ಎಣ್ಣೆ ಹೊಡೆದು ತೂರಾಡುತ್ತಾ ಬಂದ ಸತ್ತ ವ್ಯಕ್ತಿ!

ಜೀವನ ಸಾಗಿಸಲು ಬೀದಿ ಬದಿ ಸಾಬೂನು ಮಾರಾಟ ಮಾಡುತ್ತಿರುವ ಖ್ಯಾತ ನಟಿ

ಹೇಳಿಕೆಗೆ ಸ್ಪಷ್ಟನೆ ನೀಡುತ್ತ,  ಗುಂಪು ಹತ್ಯೆ ಸಮರ್ಥಕರಿಗೆ ತಿರುಗೇಟು ನೀಡಿದ ಸಾಯಿ ಪಲ್ಲವಿ

ಸಿದ್ದರಾಮಯ್ಯ ರೋಹಿತ್ ಚಕ್ರ ತೀರ್ಥನ ಬಂಧನಕ್ಕೆ ಕರೆ ನೀಡಿದ್ದು ಅಸಂವಿಧಾನಿಕ: ನಟ ಚೇತನ್

ಇತ್ತೀಚಿನ ಸುದ್ದಿ