3 ‘ಲೋಕ’ ಕ್ಷೇತ್ರದ ಬಗ್ಗೆ ಹಠ ಬಿಡ್ತಿಲ್ಲ ಅಖಿಲೇಶ್ ಯಾದವ್: ಇನ್ನೂ ಫೈನಲ್ ಆಗಿಲ್ಲ ಕಾಂಗ್ರೆಸ್ ಜೊತೆಗಿನ ಒಪ್ಪಂದ

20/02/2024

ಸೋಮವಾರ ತಡರಾತ್ರಿ ನಡೆದ ಲೋಕಸಭಾ ಸೀಟು ಹಂಚಿಕೆ ಮಾತುಕತೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಒಪ್ಪಂದಕ್ಕೆ ಬರಲು ವಿಫಲವಾಗಿವೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೂ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹಿಂದೆ ಹೇಳಿದ್ದರು. ಸೀಟು ಹಂಚಿಕೆ ಅಂತಿಮಗೊಂಡ ನಂತರ, ಸಮಾಜವಾದಿ ಪಕ್ಷವು ಕಾಂಗ್ರೆಸ್‌ನ ನ್ಯಾಯ ಯಾತ್ರೆಗೆ ಸೇರುತ್ತದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮೊರಾದಾಬಾದ್ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲು ಅಖಿಲೇಶ್ ಯಾದವ್ ಸಿದ್ಧರಿಲ್ಲ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಅವರ ಪಕ್ಷವು ಅಖಿಲೇಶ್ ಅವರಿಂದ ಬಿಜ್ನೋರ್ ಸ್ಥಾನವನ್ನು ಕೋರಿತ್ತು. ಆದರೆ ಸಮಾಜವಾದಿ ಪಕ್ಷ ಅದನ್ನು ನಿರಾಕರಿಸಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಮೊರಾದಾಬಾದ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿತು. ಮೊರಾದಾಬಾದ್ ನ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದು ಅಲ್ಪ ಅಂತರದಿಂದ ಸೋತಿತ್ತು.

ಇದಲ್ಲದೆ, ಸಮಾಜವಾದಿ ಪಕ್ಷದ ಭದ್ರಕೋಟೆಗಳಲ್ಲಿ ಒಂದೆಂದು ಪರಿಗಣಿಸಲಾದ ಬಲ್ಲಿಯಾ ಸ್ಥಾನಕ್ಕೆ ಕಾಂಗ್ರೆಸ್ ತನ್ನ ರಾಜ್ಯ ಅಧ್ಯಕ್ಷ ಅಜಯ್ ರಾಯ್ ಅವರಿಗಾಗಿ ಸ್ಪರ್ಧಿಸಲು ಹೇಳಿದೆ.

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರೆಸ್ ಗೆ 17 ಲೋಕಸಭಾ ಸ್ಥಾನಗಳನ್ನು ಬಿಟ್ಟುಕೊಡಲು ಮುಂದಾಗಿದೆ. ಮುಖ್ತಾರ್ ಅನ್ಸಾರಿ ಅವರ ಸಹೋದರ ಮತ್ತು ಬಿಎಸ್ಪಿ ಸಂಸದ ಅಫ್ಜಲ್ ಅನ್ಸಾರಿ ಸೇರಿದಂತೆ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಉತ್ತರ ಪ್ರದೇಶದಿಂದ ಇನ್ನೂ 11 ಅಭ್ಯರ್ಥಿಗಳನ್ನು ಘೋಷಿಸಿದೆ.

ಜನವರಿ 30 ರಂದು ಸಮಾಜವಾದಿ ಪಕ್ಷವು ಉತ್ತರ ಪ್ರದೇಶದ 16 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು.
ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳೆರಡೂ ಇಂಡಿಯಾ ಬಣದ ಪಾಲುದಾರ ಆಗಿದೆ.

ಇತ್ತೀಚಿನ ಸುದ್ದಿ

Exit mobile version